Sunday, June 8, 2025

ಮೂಡುಬಿದಿರೆ: ಚಿರತೆಯ ಕಳೇಬರ ಪತ್ತೆ

ಮೂಡುಬಿದಿರೆ: ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕರಿಂಜೆ ಗ್ರಾಮದ ಗುತ್ತು ಎಂಬಲ್ಲಿರುವ ಸರ್ಕಾರಿ ಜಾಗದಲ್ಲಿ ವಯಸ್ಸಾದ ಚಿರತೆಯ ಕಳೇಬರ ಭಾನುವಾರ ಪತ್ತೆಯಾಗಿದೆ.

ಸುಮಾರು 8 ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದ್ದು ವಯೋಸಹಜದಿಂದಾಗಿ ಕಳೆದ 10 ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಮೂಡುಬಿದಿರೆ ಅರಣ್ಯಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಚಿರತೆಯ ಕಳೇಬರವನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್.ಎನ್. ಅವರ ಸಮ್ಮುಖದಲ್ಲಿ ಅರಣ್ಯಾಧಿಕಾರಿಗಳ ಕಛೇರಿಯ ಆವರಣದಲ್ಲಿ ದಫನ ಮಾಡಲಾಯಿತು.

ಈ ಸಂದರ್ಭ ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ, ಉಪವಲಯಾರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles