Sunday, June 8, 2025

ವಿಟ್ಲ: ಮದುವೆ ಮನೆಯಲ್ಲಿ ಕೊರಗಜ್ಜನ ವೇಷ ಧರಿಸಿ ಕುಣಿದಿದ್ದ ಮದುಮಗನ ಬಂಧನ

ವಿಟ್ಲ: ಅನ್ಯ ಧರ್ಮದ ಯುವಕನೋರ್ವ ತನ್ನ ಮದುವೆಯ ಸಂದರ್ಭ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ವೇಷ ಧರಿಸಿ ಕುಣಿದಿದ್ದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಉಪ್ಪಳದ ಉಮರುಲ್ಲಾ ಭಾಷಿತ್ ಬಂಧಿತ ಆರೋಪಿ. ಅನ್ಯಧರ್ಮದ ಯುವಕ ಕೊರಗಜ್ಜನ ವೇಷ ಧರಿಸಿ ಕುಣಿದಿರುವುದು ಹಿಂದೂ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದಂತಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ 295ಎ ಮತ್ತು 153ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles