ನವದೆಹಲಿ: 2022 ರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್)-ಪಿಜಿ ಪರೀಕ್ಷೆಯನ್ನು ಮಾರ್ಚ್ 12 ಕ್ಕೆ ನಿಗದಿಪಡಿಸಲಾಗಿತ್ತು. ಇದೀಗ ಈ ಪರೀಕ್ಷೆಯನ್ನು ಕೇಂದ್ರ ಆರೋಗ್ಯ ಇಲಾಖೆಯು ಮುಂದೂಡಿದೆ.
ಎಂಬಿಬಿಎಸ್ ವಿದ್ಯಾರ್ಥಿಗಳು ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಸರ್ಕಾರವು 6-8 ವಾರಗಳಿಗೆ ಪರೀಕ್ಷೆಯನ್ನು ಮುಂದೂಡಿದೆ.
ಇಂದು ನ್ಯಾಯಮೂರ್ತಿಗಳಾದ ಡಿ ವ್ಐ ಚಂದ್ರಚೂಡ್ ಹಾಗೂ ಸೂರ್ಯಕಾಂತ್ ಅವರ ನ್ಯಾಯ ಪೀಠವು ಎಂಬಿಬಿಎಸ್ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದೆ.