ದೆಹಲಿ: ಭಾರತದಲ್ಲಿ ಸುಮಾರು 2,00,000 ಹೊಸ ಕೊವಿಡ್ -19 ಪ್ರಕರಣಗಳನ್ನು ಕಳೆದ 24 ಗಂಟೆಗಳಲ್ಲಿ ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ 194,720 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿಸಿದೆ. ಇನ್ನು ದೇಶದಲ್ಲಿ ಸಾವಿನ ಪ್ರಮಾಣ ಕೂಡ ಏರಿಕೆಯಾಗಿದೆ. 442 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ 9,55,319 ಸಕ್ರಿಯ ಪ್ರಕರಣಗಳಿದ್ದು, 10 ಲಕ್ಷದ ಸಮೀಪಿಸುತ್ತಿದೆ. 60,405 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.