Saturday, June 7, 2025

ರಾಜ್ಯದಲ್ಲಿ ಪತ್ತೆಯಾದ 1,290 ಹೊಸ ಪ್ರಕರಣಗಳಲ್ಲಿ 1,041 ಪ್ರಕರಣಗಳು ಬೆಂಗಳೂರಿನಲ್ಲೇ ಪತ್ತೆ

ಬೆಂಗಳೂರು: ಕೊರೋನಾ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಇಂದು 1,290 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ದೃಢಪಟ್ಟಿವೆ. ರಾಜ್ಯದಲ್ಲಿ 30,10,847ಕ್ಕೆ ಒಟ್ಟು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 232 ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ. 11,345 ಸಕ್ರಿಯ ಪ್ರಕರಣ ರಾಜ್ಯದಲ್ಲಿ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಐವರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದು, ಇದರಿಂದ 38,351ಕ್ಕೆ ಒಟ್ಟು ಮೃತರ ಸಂಖ್ಯೆ ಏರಿಕೆ ಕಂಡಿದೆ.

ಇಂದು ದೃಢಪಟ್ಟಿರುವ 1,290 ಹೊಸ ಪ್ರಕರಣಗಳಲ್ಲಿ 1,041 ಪ್ರಕರಣಗಳು ಬೆಂಗಳೂರಿನಲ್ಲೇ ಪತ್ತೆಯಾಗಿವೆ. ಹಾಗೇ ಬೆಂಗಳೂರಿನಲ್ಲಿ 134 ಸೋಂಕಿತರು ಗುಣಮುಖರಾಗಿದ್ದು, ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದ ಬಾಗಲಕೋಟೆ, ಚಾಮರಾಜನಗರ, ಹಾವೇರಿ, ರಾಮನಗರ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles