ಸುಳ್ಯ: ವೃದ್ಧ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ಬೇಗ ಮಲೆ ರಕ್ಷಿತಾರಣ್ಯದಲ್ಲಿ ಬುಧವಾರ ಬೆಳಕಿಗೆ ಬಂದಿದೆ.
ಮೃತ ವ್ಯಕ್ತಿಯನ್ನು ಸುಳ್ಯ ಕಳಂಜ ಗ್ರಾಮದ ನಾಗಪ್ಪ (60) ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಸುಳ್ಯ ಕಡೆಯಿಂದ ನಡೆದುಕೊಂಡು ಬರುತ್ತಿದ್ದ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.
ಗಾರೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ನಾಗಪ್ಪ ಅನಾರೋಗ್ಯದ ಹಿನ್ನೆಲೆ ಕಳೆದೆರಡು ದಿನಗಳ ಹಿಂದೆ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.