Saturday, June 7, 2025

ಮೇ.10ರಂದು ‘ಅಂತ್ಯೋದಯದತ್ತ ಒಂದು ಹೆಜ್ಜೆ’ ಪ.ಜಾತಿ, ಪ.ಪಂಗಡಗಳ ಸಮಾವೇಶ; ಶಾಸಕ ರಘುಪತಿ ಭಟ್

ಉಡುಪಿ: ಬಿಜೆಪಿ ಉಡುಪಿ ನಗರ ಮತ್ತು ಗ್ರಾಮಾಂತರ ಬಿಜೆಪಿಯ ಜಂಟಿ ಆಶ್ರಯದಲ್ಲಿ ನಗರ ಎಸ್.ಸಿ, ಎಸ್.ಟಿ ಮೋರ್ಚಾಗಳ ಸಹಭಾಗಿತ್ವದಲ್ಲಿ ಅಂತ್ಯೋದಯದತ್ತ ಒಂದು ಹೆಜ್ಜೆ’ ಪ. ಜಾತಿ ಮತ್ತು ಪ. ಪಂಗಡಗಳ ಸಮಾವೇಶ’ ಮೇ 10ರಂದು ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು
ಉಡುಪಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಸ್ತುವಾರಿ ಸಚಿವ ಎಸ್.ಅಂಗಾರ, ರಾಜ್ಯ ಎಸ್.ಟಿ ಮೋರ್ಚಾ ಅಧ್ಯಕ್ಷ ತಿಪ್ಪರಾಜ್ ಹವಾಲ್ದಾರ್, ರಾಜ್ಯ ಎಸ್.ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಅದೇ ದಿನ ಬೆಳಿಗ್ಗೆ ಉಡುಪಿಯ ಸರಳೇಬೆಟ್ಟುವಿನ ನೆಹರು ಕಾಲೊನಿಯ ಕೊರಗರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಹಾರ ಸೇವಿಸಲಿದ್ದಾರೆ. ಬಳಿಕ ನಿರ್ಗತಿಕ ಕೊರಗ ಕುಟುಂಬಕ್ಕೆ 5 ಲಕ್ಷ ರೂ. ವೆಚ್ಚದಲ್ಲಿ ಉಡುಪಿ ನಗರ ಬಿಜೆಪಿ ಕಟ್ಟಿಸಿಕೊಟ್ಟ ಮನೆಯನ್ನು ಹಸ್ತಾಂತರಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ಎಸ್ ನಾಯ್ಕ್, ರಾಜ್ಯ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ಉಮೇಶ್ ನಾಯ್ಕ್, ನಗರ ಎಸ್.ಸಿ ಮೋರ್ಚಾ ಅಧ್ಯಕ್ಷ ಕಿರಣ್ ಕುಮಾರ್, ರಾಜ್ಯ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ನಗರ ಅಧ್ಯಕ್ಷ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles