Sunday, June 8, 2025

ಮೇ 8, 9ರಂದು ಅಥ್ಲೆಟಿಕ್ ಚಾಂಪಿಯನ್‌ಶಿಪ್ ಕ್ರೀಡಾಕೂಟ: ಶಾಸಕ ರಘುಪತಿ ಭಟ್

ಉಡುಪಿ: ಉಡುಪಿ ಜಿಲ್ಲಾ ಅಮೆಚ್ಯೂರ್ ಅಥ್ಲೆಟಿಕ್ ಆಸೋಸಿಯೇಶನ್ ವತಿಯಿಂದ ಮೇ 8 ಮತ್ತು 9 ರಂದು ಕರ್ನಾಟಕ ರಾಜ್ಯ ಹಿರಿಯರ ಮತ್ತು 20 ವಯೋಮಿತಿಯ ಪುರುಷ ಹಾಗೂ ಮಹಿಳೆಯರ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಕೂಟದ ಸಂಘಟನಾ ಸಮಿತಿ ಅಧ್ಯಕ್ಷರು ಆಗಿರುವ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ರೀಡಾಕೂಟದಲ್ಲಿ ಸುಮಾರು 750 ಮಂದಿ ಕ್ರೀಡಾಪಟುಗಳು, 75 ಜನ ಅಧಿಕಾರಿಗಳು, 50 ಮಂದಿ ಸ್ವಯಂ ಸೇವಕರು ಪಾಲ್ಗೊಳ್ಳಲಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಒಟ್ಟು 80 ಸ್ಪರ್ಧೆಗಳು ನಡೆಯಲಿವೆ ಎಂದರು.
ಇದೇ ವೇಳೆ ಜೂ. 2 ರಿಂದ 4ರವರೆಗೆ ಗುಜರಾತ್‌ನಲ್ಲಿ ನಡೆಯುವ 20ರ ವಯೋಮಿತಿಯ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಕರ್ನಾಟಕ ತಂಡದ ಆಯ್ಕೆಯು ನಡೆಯಲಿದೆ. ಜೂ. 10 ರಿಂದ 14ರವರೆಗೆ ತಮಿಳುನಾಡಿನಲ್ಲಿ ನಡೆಯುವ 60ನೇ ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ತಂಡದ ಆಯ್ಕೆಯು ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿ ಮಹೇಶ್ ಠಾಕೂರ್, ಉಡುಪಿ ಜಿಲ್ಲಾ ಅಮೆಚ್ಯೂರ್ ಅಥ್ಲೆಟಿಕ್ ಸಂಸ್ಥೆಯ ಗೌರವಾಧ್ಯಕ್ಷ ಬಾಲಕೃಷ್ಣ ಹೆಗ್ಡೆ, ಗೌರವ ಸಲಹೆಗಾರ ಅಶೋಕ್ ಅಡ್ಯಂತಾಯ, ಉಪಾಧ್ಯಕ್ಷ ಕರುಣಾಕರ ಶೆಟ್ಟಿ, ಕಾರ್ಯದರ್ಶಿ ದಿನೇಶ್ ಕುಮಾರ್, ಸದಸ್ಯ ಲಚ್ಚೇಂದ್ರ ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles