Sunday, June 8, 2025

ಇಂದಿನಿಂದ ಅತಿಥಿ ಉಪನ್ಯಾಸಕರಿಗೆ ಆನ್‌ಲೈನ್ ಮೂಲಕ ಕೌನ್ಸೆಲಿಂಗ್ ಆರಂಭ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 10,636 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆ ಹುದ್ದೆಗೆ ಅರ್ಜಿಸಲ್ಲಿಸಿರುವವರಿಗೆ ಜನವರಿ 27 ರಿಂದ 30 ರವರೆಗೆ ಆನ್‌ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಲಾಗುತ್ತದೆ.


ಈ ಕುರಿತು ಮಾಹಿತಿ ನೀಡಿರುವ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ಒಟ್ಟಾರೆ 47 ವಿಷಯಗಳಲ್ಲಿ ವಾರಕ್ಕೆ 15 ಗಂಟೆಗಳ ಬೋಧನೆಯ ಪೂರ್ಣಕಾರ್ಯಭಾರವಿರುವ 7,225 ಮತ್ತು ಭಾಗಶಃ ಕಾರ್ಯಭಾರವಿರುವ 3,411 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.


ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳು ತಮಗೆ ಬೇಕಾದ ಕಾಲೇಜನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಈಗಾಗಲೇ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿರುವವರನ್ನು ಜ್ಯೇಷ್ಠತೆಯ ಆಧಾರದ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles