ಉಡುಪಿ: ಉಪಯೋಜನಾ ನಿರ್ದೇಶಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಆತ್ಮ ಯೋಜನೆಯಡಿ ನೇಮಕಾತಿಗೆ ಆಹ್ವಾನಿಸಲಾಗಿದೆ. ತಲಾ 1 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿಗೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ.
ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಉಪ ಯೋಜನಾ ನಿರ್ದೇಶಕರ ಹುದ್ದೆ ಖಾಲಿ ಇದ್ದು. ಈ ಹುದ್ದೆಗೆ ಮಾಸಿಕ ವೇತನ 42,000 ರೂ. ಅನ್ನು ನಿಗಧಿಪಡಿಸಲಾಗಿದೆ. ಅರ್ಜಿದಾರರು ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕ್ಷೇತ್ರ ಮಟ್ಟದ ಅನುಭವ ಹೊಂದಿರಬೇಕು.
ಬೈಂದೂರಿನ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಯು ಖಾಲಿ ಇದ್ದು ಮಾಸಿಕ ವೇತನ 25,000 ರೂ. ನಿಗಧಿಪಡಿಸಲಾಗಿದೆ. ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ ಹೊಂದಿರುವ, ವಿಸ್ತರಣಾ ಕ್ಷೇತ್ರಗಳಲ್ಲಿ ಅನುಭವವುಳ್ಳ ಸ್ಥಳಿಯ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ
ಸಲ್ಲಿಸಬಹುದಾಗಿದೆ.
ಜನವರಿ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574960 ಅನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಆತ್ಮಯೋಜನೆಯ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.