Sunday, June 8, 2025

ಕವಿ ನಾಡೋಜ ಚೆನ್ನವೀರ ಕಣವಿ ವಿಧಿವಶ

ಧಾರವಾಡ: ಕಳೆದೊಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಾಡೋಜ ಚೆನ್ನವೀರ ಕಣವಿ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಕಣವಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ಕಾರಣ ಜ. 14ರಂದು ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಇವರಿಗೆ 93 ವರ್ಷ ವಯಸ್ಸಾಗಿತ್ತು.

ಚೆನ್ನವೀರ ಕಣವಿ ಕನ್ನಡದ ಸಮನ್ವಯ ಕವಿ ಹಾಗೂ ಸುನೀತಗಳ ಸಾಮ್ರಾಟ ಎಂದೇ ಪ್ರಸಿದ್ಧರು. ಇವರ ನಿಧನದಿಂದ ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿ ಕಳಚಿದಂತಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles