ಬೆಂಗಳೂರು: ನರ್ತಕ, ನೃತ್ಯ ಸಂಯೋಜಕ, ನಿರ್ದೇಶಕ, ನಿರ್ಮಾಪಕ ಮತ್ತು ನಟ ಪ್ರಭುದೇವ ಅವರು ಸಂದೇಶ್ ನಾಗರಾಜ್ ನಿರ್ಮಾಣದ ಹೊಸ ಚಿತ್ರದೊಂದಿಗೆ ಸ್ಯಾಂಡಲ್‌ವುಡ್‌ಗೆ ಮರಳಲು ಸಿದ್ಧರಾಗಿದ್ದಾರೆ.
ಲಕ್ಕಿ ಮ್ಯಾನ್ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಜೊತೆಗೆ ಹಾಡೊಂದರಲ್ಲಿ ಹೆಜ್ಜೆ ಹಾಕಿದ್ದ ಪ್ರಭುದೇವ ಇದೀಗ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕ ನಟನಾಗಿ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಚಿತ್ರವು ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ತೆರೆಕಾಣಲಿದೆ.
ಈ ಹಿಂದೆ ಕನ್ನಡದಲ್ಲಿ, ಪ್ರಭುದೇವ ಅವರು ಉಪೇಂದ್ರ ಅಭಿನಯದ H2O ಸಿನಿಮಾದಲ್ಲಿ ನಟಿಸಿದ್ದರು. ಕನ್ನಡದವರೇ ಆದ ಪ್ರಭುದೇವ್ ಹಿಂದಿಯಲ್ಲಿ ಸ್ಟಾರ್ ನಿರ್ದೇಶಕರಾಗಿ, ಕೊರಿಯೋಗ್ರಾಫರ್ ಆಗಿ ಹೆಸರು ಮಾಡಿದ್ದು, ಇದೀಗ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಬರುತ್ತಿದ್ದಾರೆ.