ಭೋಪಾಲ್: ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಕುರಿತ ವಿವಾದ ತೀವ್ರ ಸ್ವರೂಪವನ್ನು ಪಡೆಯುತ್ತಿದೆ. ಈ ಹಿನ್ನಲೆಯಲ್ಲೇ ಮಧ್ಯಪ್ರದೇಶದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಲು ತಯಾರಿ ನಡೆಸಲಾಗುತ್ತಿದೆ.
ಹಿಜಾಬ್ ಶಾಲಾ ಸಮವಸ್ತ್ರ ಸಂಹಿತೆಯ ಭಾಗವಲ್ಲ. ಒಂದು ವೇಳೆ ಹಿಜಾಬ್ ಧರಿಸಿ ಬಂದರೆ ಅವರನ್ನು ನಿಷೇಧಿಸಲಾಗುತ್ತದೆ. ಇನ್ನು ಮುಂದೆ ಶಾಲಾ-ಕಾಲೇಜಿನಲ್ಲಿ ಅನ್ವಯವಾಗುವ ಏಕರೂಪ ಸಮವಸ್ತ್ರ ಸಂಹಿತೆಯನ್ನು ವಿದ್ಯಾರ್ಥಿಗಳು ಪಾಲಿಸಬೇಕು ಎಂದು ಮಧ್ಯಪ್ರದೇಶದ ಶಾಲಾ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಅವರು ತಿಳಿಸಿದ್ದಾರೆ.