ಮಂಗಳೂರು: ನಗರದ ಪೆಂಟ್ ಹೌಸ್ ಒಂದರಲ್ಲಿ ಕಾಲೇಜು ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ವೇಷ್ಯಾವಾಟಿಕೆ ನಡೆಸುತ್ತಿದ್ದ ಓರ್ವ ಪುರುಷ ಹಾಗೂ ಇಬ್ಬರು ಮಹಿಳೆಯರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಸೇರಿದಂತೆ ಒಟ್ಟು ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಶಮೀನಾ, ಆಯಿಷಮ್ಮ, ಸಿದ್ದೀಕ್ ಬಂಧಿತ ಆರೋಪಿಗಳು. ದೃಷ್ಯಾವಳಿ ಇಟ್ಟುಕೊಂಡು ಬಾಲಕಿಯರಿಗೆ ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ಅಪ್ರಾಪ್ತೆ ನೀಡಿದ ದೂರಿನ ಮೇರೆಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯಿದೆ, ಐ.ಟಿ.ಪಿ ಪ್ರಕರಣದಡಿ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಸಿ.ಬಿ ಪೊಲೀಸರಿಗೆ ಹೆಚ್ಚಿನ ತನಿಖೆ ನಡೆಸಲು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಸೂಚಿಸಿದ್ದಾರೆ. ಕಾನೂನು ಸುವ್ಯವಸ್ಥೆ ವಿಭಾಗದ ಡಿ.ಸಿ.ಪಿ ಹರಿರಾಂ ಶಂಕರ್ ಮೇಲುಸ್ತುವಾರಿಯಲ್ಲಿ ತನಿಖೆಗೆ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.