ಕುಂದಾಪುರ: ಬಾವಿಗೆ ಬಿದ್ದ ಚಿರತೆಯೊಂದನ್ನು ರಕ್ಷಿಸಿದ ಘಟನೆ ಕುಂದಾಪುರ ವಲಯ ಅರಣ್ಯ ವ್ಯಾಪ್ತಿಗೊಳಪಡುವ ಕೆರಾಡಿಯಲ್ಲಿ ಸೋಮವಾರ ನಡೆದಿದೆ.
ಕೆರಾಡಿಯ ಸುಕುಮಾರ ಶೆಟ್ಟಿ ಅವರ ಮನೆಯ ಆವರಣವಿಲ್ಲದ ಬಾವಿಗೆ ಚಿರತೆ ಬಿದ್ದಿರುವುದನ್ನು ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಬಾವಿಗೆ ಹಗ್ಗ ಕಟ್ಟಿದ ಬೋನು ಬಿಟ್ಟು ಚಿರತೆಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ.
ಮೂರೂವರೆ ವರ್ಷದ ಹೆಣ್ಣು ಚಿರತೆ ಇದಾಗಿದ್ದು ಆಹಾರವರಸಿ ಬಂದು ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬಹುದು ಎಂದು ಊಹಿಸಲಾಗಿದೆ.