Saturday, June 7, 2025

ಸುರತ್ಕಲ್ ಎನ್‌ಐಟಿಕೆ ಟೋಲ್ ಗೇಟ್ ವಿರುದ್ಧ ಕೆಸರಲ್ಲಿ ಕುಳಿತು ಪ್ರತಿಭಟನೆ

ಮಂಗಳೂರು: ಸುರತ್ಕಲ್ ಎನ್‌ಐಟಿಕೆ ಬಳಿ ಇರುವ ಟೋಲ್‌ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಆಸೀಫ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ ಐದನೇ ದಿನಕ್ಕೆ ಕಾಲಿಟ್ಟಿದೆ.


ಗುಂಡಿಯಲ್ಲಿ ನೀರು ತುಂಬಿಸಿ, ಕೆಸರು ಗದ್ದೆಯಲ್ಲಿ ಕುಣಿದು ಕುಪ್ಪಳಿಸುವ ಮೂಲಕ ಆಸೀಫ್ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ವಿವಿಧ ಸಂಘಟನೆಗಳು ಹಾಗೂ ಸ್ಥಳೀಯರಿಂದ ಬೆಂಬಲ ವ್ಯಕ್ತವಾಗಿದೆ.


ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಬೇಕು ಎಂದು ಆಸೀಪ್ ಒತ್ತಾಯಿಸಿದ್ದಾರೆ. ಅಲ್ಲದೇ, ಕಿಲೋಮೀಟರ್ ಅಂತರದಲ್ಲಿ ಎರಡು ಟೋಲ್‌ಗೇಟ್‌ಗಳ ಅಗತ್ಯವಿಲ್ಲ. ಟೋಲ್‌ಗೇಟ್ ಮುಚ್ಚದಿದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles