ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ವೇಳೆ ಜೆಇಇ ಮುಖ್ಯ ಪರೀಕ್ಷೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪದವಿಪೂರ್ವ ಶಿಕ್ಷಣ ಮಂಡಳಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.
ಪರಿಷ್ಕೃತ ವೇಳಾಪಟ್ಟಿಯ ಅನುಸಾರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ಎಪ್ರಿಲ್ 22 ರಿಂದ ಮೇ 11ರ ವರೆಗೆ ನಡೆಯುತ್ತದೆ ಎಂದು ತಿಳಿಸಿದೆ. ಹಳೆಯ ವೇಳಾಪಟ್ಟಿಯ ದಿನಾಂಕದಂದೇ ಜೆಇಇ ಪರೀಕ್ಷಾ ದಿನಾಂಕ ನಿಗದಿಯಾಗಿರುವುದರಿಂದ ವಿದ್ಯಾರ್ಥಿಗಳು ಜೆಇಇ ಪರೀಕ್ಷೆಯಿಂದ ವಂಚಿತರಾಗಬಾರದೆಂದು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪರಿಷ್ಕರಿಸಲಾಗಿದೆ.