ಉತ್ತರಕನ್ನಡ: ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪರಿಸರ ಹಾಡುಗಾರ ಮಾದೇವ ವೇಳಿಪ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಇಂದು ಮುಂಜಾನೆ ನಿಧನರಾಗಿದ್ದಾರೆ.
ಮಾದೇವ ವೇಳಿಪ ಅವರು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಕಾರ್ಟೋಳಿ ಗ್ರಾಮದವರು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರಿಗೆ 90 ವರ್ಷ ವಯಸ್ಸಾಗಿತ್ತು.
ಮಾದೇವ ವೇಳಿಪ ಅವರು ಪರಿಸರದ ಜಾನಪದ ಹಾಡುಗಳನ್ನು ಕಟ್ಟಿ ಹಾಡುತ್ತಿದ್ದರು. ಸಾವಿರಾರು ಪರಿಸರ ಹಾಡುಗಳನ್ನು ಕಟ್ಟಿ ಹಾಡುತ್ತಿದ್ದ ಇವರ ಪ್ರತಿಭೆಗೆ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.