Saturday, June 7, 2025

ಮತ್ತೆ ಒಂದಾಗಲಿರುವ ರವೀನಾ ಟಂಡನ್​ ಮತ್ತು ಸಂಜಯ್​ ದತ್

ಕೊರೋನಾ ಕಾರಣದಿಂದ ಒಂದೊಂದೇ ಸಿನಿಮಾಗಳು ಬಿಡುಗಡೆಯಾಗುವ ದಿನಾಂಕವನ್ನು ಮುಂದೂಡುತ್ತಾ ಬರುತ್ತಿದೆ. ಈ ಪಟ್ಟಿಗೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಕೂಡ ಸೇರಿದೆ. ಈ ಸಿನಿಮಾದಲ್ಲಿ ಬಾಲಿವುಡ್ ನ​ ಸಂಜಯ್​ ದತ್ ಅಧೀರ ಪಾತ್ರವನ್ನು, ರವೀನಾ ಟಂಡನ್ ರಮಿಕಾ ಸೇನ್​ ಪಾತ್ರವನ್ನು ಅಭಿನಯಿಸಿರುವುದರಿಂದ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ. ​ಸಂಜಯ್​ ದತ್​ ಅವರು ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಅಭಿನಯ ಮಾಡುತ್ತಿದ್ದು, ರವೀನಾ ಟಂಡನ್​ ಅವರ ಎರಡನೇ ಸಿನಿಮಾ ಇದಾಗಿದೆ. ಇವರು 1999ರಲ್ಲಿ ಬಿಡುಗಡೆಯಾದ ‘ಉಪೇಂದ್ರ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದರು.

ರವೀನಾ ಟಂಡನ್​ ಮತ್ತು ಸಂಜಯ್​ ದತ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ನಂತರ ಮತ್ತೆ ತೆರೆ ಹಂಚಿಕೊಳ್ಳಲಿದ್ದಾರೆ. ಇವರಿಬ್ಬರು ನಟಿಸಲಿರುವ ಈ ಸಿನಿಮಾಗೆ ಹೊಸ ನಿರ್ದೇಶಕರು ಆ್ಯಕ್ಷನ್​-ಕಟ್​ ಹೇಳಲಿದ್ದು, ಖ್ಯಾತ ನಿರ್ಮಾಣ ಸಂಸ್ಥೆ ಬಂಡವಾಳ ಹೂಡಲಿದೆ. ಇವರಿಬ್ಬರು ಸಿನಿಮಾದಲ್ಲಿ ಜೊತೆಯಾಗಿ ನಟಿಸಲು ಈಗಾಗಲೇ ಒಪ್ಪಿಗೆಯನ್ನು ನೀಡಿದ್ದಾರೆ. ಈ ಸಿನಿಮಾದಲ್ಲಿ ಕಾಮಿಡಿ ಡ್ರಾಮಾ ಕಥೆ ಇರಲಿದೆ ಎಂದು ತಿಳಿದುಬಂದಿದೆ.

ರವೀನಾ ಟಂಡನ್​ ಮತ್ತು ಸಂಜಯ್​ ದತ್​ ಅವರು ಜೊತೆಯಾಗಿ ನಟಿಸಿದ್ದ ‘ಕ್ಷತ್ರಿಯಾ’, ‘ಆತಿಶ್’​ ಸಿನಿಮಾಗಳು ಹಿಟ್ ಆಗಿದ್ದವು. ಇನ್ನು ಈ ಸಿನಿಮಾಗೆ ಇವರಿಬ್ಬರು ಒಪ್ಪಂದಕ್ಕೆ ಸಹಿ ಹಾಕುವುದು ಬಾಕಿ ಇದ್ದು, ಕಥೆಯ ಫೈನಲ್​ ಡ್ರಾಫ್ಟ್​ ಸಿದ್ಧವಾಗಬೇಕಿದೆ. ಈ ಸಿನಿಮಾ ಅಧಿಕೃತವಾಗಿ ಫೆಬ್ರವರಿ ವೇಳೆಗೆ ಘೋಷಣೆ ಆಗುವ ನಿರೀಕ್ಷೆ ಇದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles