Sunday, June 8, 2025

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ:ಒಂದೇ ದಿನ ೨.೫೮ಲಕ್ಷ ಮಂದಿಗೆ ಸೋಂಕು ದೃಢ:೩೮೫ ಮಂದಿ ಸಾವು

ಭಾರತ:ಕೊರೊನಾ ವೈರಸ್‌ನ ಮೂರನೆ ಅಲೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಳೆದ ೨೪ಗಂಟೆಗಳಲ್ಲಿ ಭಾರತದಲ್ಲಿ ಬರೋಬ್ಬರಿ ೨.೫೮ಲಕ್ಷ ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ ೩.೭೩ಕೋಟಿಗೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿಯನ್ನು ನೀಡಿದೆ.


ದೇಶದಲ್ಲಿ ಒಂದೇ ದಿನ ಕೊರೊನಾ ಮಹಾಮಾರಿಗೆ ೩೮೫ಮಂದಿ ಸಾವಿಗೀಡಾಗಿದ್ದು, ಆ ಮೂಲಕ ಕೋವಿಡ್‌ಗೆ ಬಲಿಯಾದವರ ಸಂಖ್ಯೆ ೪,೮೬,೪೫೧ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಒಂದೇ ದಿನ ೧,೫೧,೭೪೦ ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿದ ಚೇತರಿಸಿಕೊಂಡಿರುವವರ ಸಂಖ್ಯೆ ೩.೫೨ಕೋಟಿಗೆ ಏರಿಕೆಯಾಗಿದೆ. ಸದ್ಯ ೧೬,೫೬,೩೪೧ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ಅತೀ ಹೆಚ್ಚು ಕೊರೊನಾ ಪಾಸಿಟಿವ್ ಇರುವ ರಾಜ್ಯಗಳ ಪೈಕಿ ಮಹಾರಾಷ್ಟ್ರ, ಕೇರಳ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮುಂಚೂಣಿಯಲ್ಲಿವೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles