ಮಾಸ್ಕೋ: ರಷ್ಯಾ ಮತ್ತು ಉಕ್ರೇನ್ ನಡುವೆ ಈ ಹಿಂದೆ ಎರಡು ಬಾರಿ ಮಾತುಕತೆ ನಡೆದಿದ್ದರೂ ಯಾವುದೇ ನಿರ್ಧಾರ ಅಥವಾ ಒಪ್ಪಂದಕ್ಕೆ ಬಂದಿಲ್ಲ. ಇದೀಗ ಸೋಮವಾರ ಮೂರನೇ ಸುತ್ತಿನ ಮಾತುಕತೆ ನಡೆಯಲಿದೆ ಎಂದು ಉಕ್ರೇನಿಯನ್ ಅಧಿಕಾರಿ ಡೇವಿಡ್ ಅರ್ಖಾಮಿಯಾ ತಿಳಿಸಿದ್ದಾರೆ.
ರಷ್ಯಾ-ಉಕ್ರೇನ್ ಯುದ್ಧವು 11 ನೇ ದಿನಕ್ಕೆ ಕಾಲಿಟ್ಟಿದ್ದು, ಇದುವರೆಗೆ ಯುದ್ಧ ನಿಲ್ಲಿಸಲು ನಡೆದ ಎರಡು ಸುತ್ತಿ ಮಾತುಕತೆ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಮೂರನೇ ಸುತ್ತಿನ ಮಾತುಕತೆ ನಡೆಸಲಾಗುತ್ತಿದೆ. ರಷ್ಯಾವು ಉಕ್ರೇನ್ ಮೇಲೆ ಭಾರಿ ಪ್ರಮಾಣದ ಬಾಂಬ್ ದಾಳಿ ನಡೆಸಿದ್ದು, ಇದರಿಂದ ಅನೇಕ ನಗರಗಳು ನಾಶಗೊಂಡಿದೆ.