Sunday, June 8, 2025

ಕೊರೊನಾದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 2 ಶಾಲೆಗಳು ಬಂದ್

ಮಂಗಳೂರು: ಕೊರೊನಾ ವೈರಸ್‌ನ ಕರಿನೆರಳು ಶಾಲೆಗಳ ಮೇಲೆ ಬಿದ್ದಿದ್ದು, ವರ್ಷಗಳೇ ಕಳೆದರೂ ಕೂಡ ಮಕ್ಕಳಿಗೆ ಸರಿಯಾಗಿ ಶಾಲೆಗೆ ಹೋಗಿ ಓದಲು ಸಾಧ್ಯವಾಗುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಕಾರಣಕ್ಕೆ ಇದೀಗ ಮತ್ತೆ 2 ಶಾಲೆಗಳು ಮುಚ್ಚಿವೆ. ಆ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 12ಶಾಲೆಗಳು ಬಂದ್ ಆಗಿವೆ ಎಂದು ವರದಿಯಾಗಿದೆ.


ಕೊರೊನಾ ಕಾರಣದಿಂದಾಗಿ ಜಿಲ್ಲೆಯ ಮಂಗಳೂರು ಉತ್ತರದ 2 ಶಾಲೆಗಳಿಗೆ ಶುಕ್ರವಾರ ನಿರ್ಧಿಷ್ಟಾವಧಿಯ ರಜೆಯನ್ನು ಘೋಟಣೆ ಮಾಡಲಾಗಿದೆ. ಇನ್ನು, ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಮಕ್ಕಳಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಈವರೆಗೆ 300 ಮಕ್ಕಳಿಗೆ ಸೋಂಕು ತಗುಲಿದೆ ಎಂದು ಹೇಳಲಾಗಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 4 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕು ದೃಢಪಟ್ಟ ಶಿಕ್ಷಕರ ಸಂಖ್ಯೆ 47 ಕ್ಕೆ ಏರಿಕೆಯಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles