ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.
ಪ್ರಶ್ನೆಪತ್ರಿಕೆಗಳು pue.kar.nic.in ವೆಬ್ಸೈಟ್ನಲ್ಲಿ ಲಭ್ಯವಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಸಚಿವರು ಟ್ವೀಟ್ ಮಾಡುವ ಮುಖಾಂತರ ತಿಳಿಸಿದ್ದಾರೆ.