ಪುತ್ತೂರು: ಪುತ್ತೂರಿನ ಹಿರಿಯ ಪತ್ರಕರ್ತ ಬಿ.ಟಿ. ರಂಜನ್(60) ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ನಿಧನರಾಗಿದ್ದಾರೆ.
ಶುಕ್ರವಾರ ತಮ್ಮ ನಿವಾಸದಲ್ಲಿರುವಾಗ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ.
ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ.ರಂಜನ್ ಕರಾವಳಿಯ ಹಲವು ಪತ್ರಿಕೆಗಳಿಗೆ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿದ್ದು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.