Sunday, June 8, 2025

ಗಾಯಕಿ ಲತಾ ಮಂಗೇಶ್ಕರ್ ಕೊವಿಡ್ ನಿಂದಾಗಿ ಆಸ್ಪತ್ರೆಗೆ ದಾಖಲು

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಇದರಿಂದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಪ್ರಸ್ತುತ ಅವರ ಆರೋಗ್ಯ ಕುರಿತು ಬಗ್ಗೆ ವೈದ್ಯರು ಯಾವುದೇ ಮಾಹಿತಿಯನ್ನು ನೀಡಿಲ್ಲ.

ಭಾರತದಲ್ಲಿ ಕೊರೊನಾ ವೇಗವಾಗಿ ಹರಡುತ್ತಿದೆ. ಕೇಂದ್ರ ಸಚಿವರು, ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಸೇರಿದಂತೆ ಅನೇಕ ಸೆಲೆಬ್ರಿಟಿಗಳೂ ಕೊವಿಡ್ ಸೋಂಕಿಗೆ ಒಳಗಾಗಿದ್ದಾರೆ. ಇದೀಗ ವರ್ಷದ ಲತಾ ಮಂಗೇಶ್ವರ್ ಅವರಿಗೂ ಕೋವಿಡ್ ಸೋಂಕು ದೃಢ ಪಟ್ಟಿದೆ.

2001ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, ಫ್ರಾನ್ಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ, ಆಫೀಸರ್ ಆಫ್ ದಿ ಲೀಜನ್ ಆಫ್ ಹಾನರ್, ಜೊತೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳು ದೊರೆತಿವೆ. 25,000ಕ್ಕೂ ಹೆಚ್ಚು ಹಾಡುಗಳನ್ನು ಇವರು 1948 – 1974 ರ ಮಧ್ಯೆ ಹಾಡಿ ಲತಾ ಮಂಗೇಶ್ವರ್ ಅವರು ಗಿನ್ನೆಸ್ ವರ್ಲ್ಡ್​ ರೆಕಾರ್ಡ್ ಕೂಡ ಮಾಡಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles