ಕುಂದಾಪುರ: ಕೆ.ಎಸ್.ಆರ್.ಟಿ.ಸಿ ಬಸ್‍ನಲ್ಲಿ ವಿನೂತನ ಮಾದರಿ ಸ್ಮಾರ್ಟ್ ತರಗತಿ ಉದ್ಘಾಟನೆ ಸ.ಹಿ.ಪ್ರಾ. ಶಾಲೆ ನೂಜಾಡಿ-2, ಬಗ್ವಾಡಿಯಲ್ಲಿ ಶನಿವಾರ ನಡೆಯಿತು.
ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಕೊಡುವ ಕಾರ್ಯವಾಗುತ್ತಿದೆ. ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾದರೆ ಮಾತ್ರ ದೇಶ ಬದಲಾಗಲು ಸಾಧ್ಯ. ಕಷ್ಟದಿಂದ ಓದಿದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆರುತ್ತಾರೆ. ಶಿಕ್ಷಣದಿಂದ ಯಾವ ಮಗುವೂ ಕೂಡಾ ವಂಚಿತವಾಗಬಾರದು ಎಂದರು.
ಈ ವೇಳೆ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಹಕ್ಲಾಡಿ ಗ್ರಾ.ಪಂ. ಅಧ್ಯಕ್ಷ ಚೇತನ್ ಕುಮಾರ್, ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗ ಮುಖ್ಯಸ್ಥ ಕಮಲ್ ಕುಮಾರ್, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಮ್.ಮುಂದಿನಮನಿ, ಹಕ್ಲಾಡಿ ಗ್ರಾ. ಪಂ ಸದಸ್ಯ ಅಶೋಕ ಪೂಜಾರಿ, ಶಾರದಾ ಮೊಗವೀರ, ಭಾರತ ಸರ್ಕಾರದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ನಿವೃತ್ತ ನಿರ್ದೇಶಕ ಬಿ.ಎನ್.ಶೆಟ್ಟಿ, ಪುರೋಹಿತ ನಾಗಪ್ಪಯ್ಯ ಭಟ್ ಬೈಲೂರು, ಕೆ.ಎಸ್.ಆರ್.ಟಿ.ಸಿ ಡಿಪೋ ಮೆನೇಜರ್ ರಾಜೇಶ, ಎಸ್.ಡಿ.ಎಂ.ಸಿ ಸಮನ್ವಯ ಸಮಿತಿ ಜಿಲ್ಲಾ ಅಧ್ಯಕ್ಷ ಅಬ್ದುಲ್ ಸಲಾಮ್, ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಉದಯಕುಮಾರ್ ಹಟ್ಟಿಯಂಗಡಿ, ಉದ್ಯಮಿ ಕೆ.ಅಬ್ದುಲ್ ರೆಹಮಾನ್, ಅಜಿತ್ ಕುಮಾರ್ ಬಗ್ವಾಡಿ, ಬಗ್ವಾಡಿ ಮಹಿಷಾಸುರಮರ್ದಿನಿ ಯುವಕ ಮಂಡಲದ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ ಪುತ್ರನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ.ರಾಜೀವ ಶೆಟ್ಟಿ, ವಿದ್ಯಾರ್ಥಿ ನಾಯಕಿ ಪ್ರಜ್ಞಾ ಉಪಸ್ಥಿತರಿದ್ದರು.
ಈ ಸಂದರ್ಭ ಮಿನಿಯೇಚರ್ ಬಸ್ ನಿರ್ಮಾತೃ ಪ್ರಶಾಂತ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಶೈಲಜಾ ವಿ.ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಸಂತರಾಜ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.