Wednesday, June 18, 2025

ಸುಳ್ಯದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವಿಶೇಷ ಸಭೆ

ಸುಳ್ಯ: ಹಿಂದುಳಿದ ವರ್ಗಗಳ ಮೋರ್ಚಾವನ್ನು ತಳಮಟ್ಟದಲ್ಲಿ ಕಟ್ಟುವ ಕೆಲಸ ಮಾಡಲಾಗುತಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ ಹೇಳಿದ್ದಾರೆ.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲದ ವತಿಯಿಂದ ಶ್ರೀ ವೆಂಕಟರಮಣ ದೇವ ಮಂದಿರದ ಶ್ರೀನಿವಾಸ ಪದ್ಮಾವತಿ ಸಭಾಭವನದಲ್ಲಿ ನಡೆದ ಓಬಿಸಿ ಮೋರ್ಚಾ ವಿಶೇಷ ಸಭೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, 2023-24ರಲ್ಲಿ ನಡೆಯುವ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ದೊಡ್ಡ ಜವಾಬ್ದಾರಿ ಕಾರ್ಯಕರ್ತರ ಮೇಲೆ ಇದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಆಗಬೇಕಾಗಿದೆ ಎಂದರು.


ಒಬಿಸಿ ಮೋರ್ಚಾ ತಾಲೂಕು ಅಧ್ಯಕ್ಷ ಚಂದ್ರಶೇಖರ ಪನ್ನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಠಲ್ ಪೂಜಾರಿ, ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ ರೆಂಜ, ಓಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಕೃಷ್ಣಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles