Saturday, June 7, 2025

ವಿದ್ಯಾರ್ಥಿ ನಿಲಯ ಪ್ರವೇಶ : ಅರ್ಜಿ ಸಲ್ಲಿಸುವ ಅವಧಿ ಜನವರಿ 3 ರ ವರೆಗೆ ವಿಸ್ತರಣೆ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿತ್ತು.

ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 3 ರ ವರೆಗೆ ವಿಸ್ತರಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.bcwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ:
0820-2574881, 2573881 ಅನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles