Monday, June 9, 2025

ಸುಳ್ಯ ಪೆರಾಜೆಯಲ್ಲಿ ಕಾರು ಪಲ್ಟಿ: ಇಬ್ಬರಿಗೆ ಗಾಯ

ಸುಳ್ಯ ಪೆರಾಜೆಯ ಪಾಲಡ್ಕ ಎಂಬಲ್ಲಿ ಐ20 ಕಾರು ಪಲ್ಟಿಯಾದ ಘಟನೆ ನಡೆದಿದೆ. ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಐ20 ಕಾರು ಪಾಲಡ್ಕ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ರಸ್ತೆಯಿಂದ ಹೊರಕ್ಕೆ ಹೋಗಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಮೂರು ಜನ ಪ್ರಯಾಣಿಸುತ್ತಿದ್ದು, ಓರ್ವ ಮಹಿಳೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಲು ನೆರವಾದರು.
ಈ ಸ್ಥಳದಲ್ಲಿ ಈ ಹಿಂದೆಯೂ ಅಪಘಾತ ನಡೆದಿದ್ದು, ಇನ್ನಾದರೂ ಸಂಬAಧಿತ ಅಧಿಕಾರಿಗಳು ಸೂಚನಾ ಫಲಕಗಳನ್ನು ಅಳವಡಿಸಬೇಕೇಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles