ಹೈದ್ರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರನ್ನು ಹೈದ್ರಾಬಾದ್ನ ಯಶೋಧಾ ಆಸ್ಪತ್ರೆಗೆ ಶುಕ್ರವಾರ ದಾಖಲು ಮಾಡಲಾಗಿದೆ.
ಕೆಸಿಆರ್ಗೆ ತೀವ್ರ ಜ್ವರ ಹಾಗೂ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಆಂಜಿಯೋಗ್ರಾಂ ಪರೀಕ್ಷೆ ನಡೆಸಿದ್ದು, ಅವರ ಹೃದಯದಲ್ಲಿ ಯಾವುದೇ ಬ್ಲಾಕ್ಗಳು ಕಂಡು ಬಂದಿಲ್ಲ. ಸಿಟಿ ಸ್ಕ್ಯಾನ್ ಮತ್ತು ಎಂಆರ್ಐ ಸ್ಕ್ಯಾನ್ಗಳನ್ನು ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.