Sunday, June 8, 2025

ಎಸ್‌ಐಗೆ ಚೂರಿ ಇರಿದು ಆರೋಪಿ ಪರಾರಿ

ಉಳ್ಳಾಲ: ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿ ಆರೋಪಿ ಪರಾರಿಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಹಲ್ಲೆಯಲ್ಲಿ ಗಾಯಗೊಂಡ ಎಸ್‌ಐ ಶರಣಪ್ಪ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿಯು ಬೆಲೆಬಾಳುವ ವಾಚ್ ಕಳ್ಳತನ ಮಾಡಿ ಪಾವೂರಿನ ಆತನ ಅತ್ತೆ ಮನೆಯಲ್ಲಿ ಅಡಗಿ ಕುಳಿತಿದ್ದ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದರು.

ಈ ಹಿಂದೆ ಆರೋಪಿಯು ಬೆಲೆಬಾಳುವ ವಾಚ್‌ನ್ನು ಅಂಗಡಿಯೊಂದಕ್ಕೆ ಮಾರಾಟ ಮಾಡಲು ತೆರಳಿದ್ದನು. ಈ ಮಾಹಿತಿಯನ್ನು ಅಂಗಡಿ ಮಾಲೀಕರು ಪೊಲೀಸರಿಗೆ ತಿಳಿಸಿದ್ದಾರೆ. ನಗರ ಪೊಲೀಸರು ಆತನನ್ನು ವಶಕ್ಕೆ ಪಡೆಯಲು ತೆರಳಿದ್ದಾಗ ಪೊಲೀಸ್‌ ಸಿಬ್ಬಂದಿಗೆ ಆರೋಪಿ ಚೂರಿಯಿಂದ ಇರಿದು ಪರಾರಿಯಾಗಿದ್ದನು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles