ಮಂದಾರ್ತಿ: ಮಂದಾರ್ತಿ ಹೆಗ್ಗಂಜೆ ಸಮೀಪ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಕಾರಿನಲ್ಲಿ ಜೋಡಿಯ ಮೃತದೇಹ ಪತ್ತೆಯಾಗಿದೆ.
ಇಂದು ಮುಂಜಾನೆ ೩.೩೦ರ ಸುಮಾರಿಗೆ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ನೋಡಿದ ಸ್ಥಳಿಯರು ವಿದ್ಯುತ್ ಅವಘಡಡ ಆಗಿರಬಹುದು ಎಂದು ಎದ್ದು ಬಂದು ನೋಡಿದರೆ ಹೊತ್ತಿ ಉರಿಯುವ ಕಾರು ಪ್ರತ್ಯಕ್ಷವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು, ಬೆರಳಚ್ಚು ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಕಾರಿನಲ್ಲಿ ಇದ್ದ ಮೃತ ದೇಹ ಯಾರದ್ದು? ಇದು ಅಪಘಾತವೋ ಅಥವಾ ಆತ್ಮಹತ್ಯೆಯೋ? ಎನ್ನವುದು ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ.
ಮಂದಾರ್ತಿ ಹೆಗ್ಗಂಜೆ ಸಮೀಪ ಸುಟ್ಟು ಕರಕಲಾದ ಕಾರಿನಲ್ಲಿ ಜೋಡಿಯ ಮೃತದೇಹ ಪತ್ತೆ
Subscribe
Login
0 Comments