Monday, June 9, 2025

ಬಂಟ್ವಾಳದಲ್ಲಿ ಆಟವಾಡುತ್ತಿದ್ದ ವೇಳೆ ಮೂರನೇ ಮಹಡಿಯಿಂದ ಬಿದ್ದು ಬಾಲಕ ಸಾವು..!

ಬಂಟ್ವಾಳ: ಗೆಳಯರ ಜೊತೆ ಆಟವಾಡುತ್ತಿದ್ದ ವೇಳೆ ಆಯತಪ್ಪಿ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಶುಕ್ರವಾರ ನಡೆದಿದೆ.
ಕಲ್ಲಡ್ಕ ಗೋಳ್ತಮಜಲು ನಿವಾಸಿ ಅಹ್ಮದ್ ಎಂಬುವವರ ಪುತ್ರ ಮುಹಮ್ಮದ್ ಸಾಹಿಲ್ (10), ಮೃತಪಟ್ಟ ಬಾಲಕ. ಗೋಳ್ತಮಜಲು ಸಿಟಿ ಪ್ಲಾಝಾ ಫ್ಲ್ಯಾಟ್ ನಲ್ಲಿ ಈ ಘಟನೆ ನಡೆದಿದೆ. ಗೆಳೆಯರ ಜೊತೆ ಆಟವಾಡುತ್ತಿದ್ದ ಸಾಹಿಲ್ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles