Sunday, June 8, 2025

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ನಡೆಸಲು ಸೂಚನೆ

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಜಿಲ್ಲಾಮಟ್ಟದಲ್ಲಿ ಪ್ರಥಮ ಪಿಯುಸಿ ವಾರ್ಷಿಕ ಮತ್ತು ಪೂರಕ ಪರೀಕ್ಷೆಗಳನ್ನು ನಡೆಸುವಂತೆ ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ಮಧ್ಯಾಹ್ನ 2.30 ರಿಂದ 5.45 ರ ಸಮಯದಲ್ಲಿ ಪರೀಕ್ಷೆಯನ್ನು ನಡೆಸಬೇಕು. ಏಪ್ರಿಲ್ 20 ರ ಒಳಗೆ ಮೌಲ್ಯಮಾಪನವನ್ನು ಪೂರ್ಣಗೊಳಿಸಬೇಕು. ಏಪ್ರಿಲ್ 30 ರಂದು ಆಯಾ ಕಾಲೇಜಿನಲ್ಲಿ ಫಲಿತಾಂಶ ಪ್ರಕಟಿಸಬೇಕು ಎಂದು ನಿರ್ದೇಶಕರು ತಿಳಿಸಿದ್ದಾರೆ.

ಪೂರಕ ಪರೀಕ್ಷೆಯ ಶುಲ್ಕವನ್ನು ಮೇ 16 ರ ಒಳಗೆ ಕಟ್ಟಿಸಿಕೊಂಡು, ಮೇ 25 ರಿಂದ ಜೂನ್ 6 ರ ವರೆಗೆ ಪೂರಕ ಪರೀಕ್ಷೆಗಳನ್ನು ನಡೆಸಿ, ಜೂನ್ 15 ರಂದು ಫಲಿತಾಂಶ ಪ್ರಕಟಿಸಬೇಕು. ಜಿಲ್ಲಾ ಹಂತದಲ್ಲಿ ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿಯೇ ಪ್ರಶ್ನೆಪತ್ರಿಕೆ ತಯಾರಿ ಮತ್ತು ಮುದ್ರಣದ ಕೆಲಸವನ್ನು ನಡೆಸಬೇಕು. ನೋಡೆಲ್ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಇರಿಸಿ ವೇಳಾಪಟ್ಟಿಗೆ ಅನುಸಾರವಾಗಿ ಪ್ರಾಂಶುಪಾಲರಿಗೆ ಪಶ್ನೆ ಪತ್ರಿಕೆ ನೀಡಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles