Sunday, June 8, 2025

ಚನ್ನವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ

ಧಾರವಾಡ: ಜಿಲ್ಲೆಯ ಎಸ್ ಡಿಎಂ ಆಸ್ಪತ್ರೆಯು ನಾಡೋಜ ಚನ್ನವೀರ ಕಣವಿ ಅವರ ಆರೋಗ್ಯ ಸ್ಥಿತಿ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಚನ್ನವೀರ ಕಣವಿ ಅವರ ಶ್ವಾಸಕೋಶದಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿದೆ. ಇದರಿಂದ ಶ್ವಾಸಕೋಶ ಉಸಿರಾಟದ ಶಕ್ತಿ ಕಳೆದುಕೊಂಡು ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.

ಜನವರಿ 14 ರಂದು ಚನ್ನವೀರ ಕಣವಿ ಅವರು ಉಸಿರಾಟದ ತೊಂದರೆ ಇಂದ ಎಸ್ ಡಿಎಂ ಆಸ್ಪತ್ರೆಗೆ ತಪಾಸಣೆಗೆಂದು ಹೋದಾಗ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಕಣವಿ ಅಂದೇ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯದಲ್ಲಿಯಾವುದೇ ತೊಂದರೆ ಇಲ್ಲವೆಂದು ಹೇಳಲಾಗುತ್ತಿತ್ತು. ಆದರೆ ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles