ಬೆಂಗಳೂರು: ಕರ್ನಾಟಕದಲ್ಲಿ ಆನ್ಲೈನ್ ಗೇಮಿಂಗ್ಗೆ ಹೈಕೋರ್ಟ್ ಇಂದು ಗ್ರೀನ್ ಸಿಗ್ನಲ್ ನೀಡಿದೆ. ಈ ಹಿಂದೆ ರಾಜ್ಯದಲ್ಲಿ ಆನ್ಲೈನ್ ಗೇಮಿಂಗ್ಗೆ ನಿಷೇಧ ಹೇರಲಾಗಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಗೇಮಿಂಗ್ ಕಂಪನಿಗಳು ಕೊರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿ ಕುರಿತು ತೀರ್ಪು ನೀಡಿದ ಹೈಕೋರ್ಟ್ ಆನ್ಲೈನ್ ಗೇಮಿಂಗ್ಗೆ ಗ್ರೀನ್ ಸಿಗ್ನಲ್ ನೀಡಿ ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ.
ಸರ್ಕಾರ ಆನ್ಲೈನ್ ಗೇಮಿಂಗ್ ನಿಷೇಧ ಮಾಡುವ ಕ್ರಮ ಸಂವಿಧಾನ ಬದ್ಧವಲ್ಲ. ಆನ್ಲೈನ್ ಗೇಮಿಂಗ್ ಸಂಸ್ಥೆಗಳ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುವಂತಿಲ್ಲ. ಸರ್ಕಾರಕ್ಕೆ ಸಂವಿಧಾನ ಬದ್ಧವಾದ ಶಾಸನ ರೂಪಿಸಲು ಸ್ವತಂತ್ರವಿದೆ. ಆದರೆ ಆನ್ಲೈನ್ ಗೇಮಿಂಗ್ಗೆ ನಿಷೇಧಿಸುವ ಆದೇಶ ಕಾನೂನು ಬಾಹಿರ ಎಂದು ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ರ ಪೀಠ ಆನ್ಲೈನ್ ಗೇಮ್ಗೆ ಗ್ರೀನ್ ಸಿಗ್ನಲ್ ನೀಡಿದೆ.