ಮಾ.11ರಂದು ಬಿಡುಗಡೆಯಾಗಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಪ್ರಸ್ತುತ ಭಾರತದಾದ್ಯಂತ ಸಂಚಲನ ಸೃಷ್ಟಿಸಿದೆ. ಬಿಡುಗಡೆಯಾದ ಒಂದು ವಾರದೊಳಗೆ 79ಕೋಟಿ ಗಳಿಕೆ ಮಾಡುವುದರೊಂದಿಗೆ ಹಲವಾರು ದಾಖಲೆಗಳನ್ನು ಸೃಷ್ಟಿ ಮಾಡಿದೆ.
ಚಿತ್ರ ಬಿಡುಗಡೆಯಾದ ಮೊದಲನೆ ದಿನ 3.5ಕೋಟಿ ಗಳಿಕೆ ಮಾಡಿದ್ದ ದಿ ಕಾಶ್ಮೀರ್ ಫೈಲ್ಸ್ ಚಿತ್ರ ಆರನೇ ದಿನದ ಕೊನೆಯಲ್ಲಿ 79ಕೋಟಿ ಗಳಿಕೆ ಮಾಡುವ ಮೂಲಕ ಎಲ್ಲರಲ್ಲಿ ಅಚ್ಚರಿ ಮೂಡಿಸಿದೆ. ಚಿತ್ರದ ಕಲೆಕ್ಷನ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಹೆಚ್ಚು ಪ್ರಚಾರ ಇಲ್ಲದೇ ಬಿಡುಗಡೆಯಾದ ದಿ ಕಾಶ್ಮೀರ್ ಫೈಲ್ಸ್ ಚಿತ್ರ ಬಿಡುಗಡೆಯಾದ ಬಳಿಕ ಭರ್ಜರಿ ಪ್ರಚಾರ ಪಡೆದಿದೆ.