Sunday, June 8, 2025

ಭಾರತದಲ್ಲಿ ಇಳಿಕೆಯತ್ತ ಸಾಗಿದ ಕೊರೊನಾ ಸೋಂಕಿತರ ಸಂಖ್ಯೆ: ಒಂದೇ ದಿನ 3.06 ಲಕ್ಷ ಪಾಸಿಟಿವ್ ಕೇಸ್ ಪತ್ತೆ

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಕೆಯತ್ತ ಸಾಗುತ್ತಿದೆ. ಕೊರೊನಾ ಸೋಂಕಿನಿಂದ ಬೇಸತ್ತಿದ್ದ ಜನರಿಗೆ ಇದೀಗ ಕೊಂಚ ಸಮಾಧಾನ ಉಂಟಾಗಿದೆ. ಕಳೆದ 24 ಗಂಟೆಗಳಲ್ಲಿ 3,06,064 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಯನ್ನು ನೀಡಿದೆ.


ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 439 ಮಂದಿ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿರುವ ಕುರಿತು ಹೇಲ್ತ್ ಬುಲೆಟಿನ್‌ನಲ್ಲಿ ಮಾಹಿತಿ ಲಭ್ಯವಾಗಿದೆ. ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 4,89,848 ಕ್ಕೆ ಏರಿಕೆಯಾಗಿದೆ. ಇನ್ನು, ಒಂದೇ ದಿನ 14,74,753 ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿದ್ದು, ದಿನದ ಪಾಸಿಟಿವಿಟಿ ದರ ಶೇ.20.75 ರಷ್ಟಿದೆ ಎಂದು ಹೇಳಲಾಗಿದೆ. 24 ಗಂಟೆಗಳಲ್ಲಿ 2,43,495 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆ ಮೂಲಕ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 3,68,04,145ಕ್ಕೆ ಏರಿಕೆಯಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles