ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜನವರಿ ತಿಂಗಳ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ಅವರು ಭಾಗವಹಿಸಲಿದ್ದಾರೆ.
ನಾಳೆ (ಜ.29) ಬೆಳಗ್ಗೆ 11 ಗಂಟೆಗೆ ಉಡುಪಿ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಅಲೆವೂರು ಅವರು ವಹಿಸಲಿದ್ದಾರೆ.
ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಅವರು ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಿನಂತಿಸಿಕೊಂಡಿದ್ದಾರೆ.