Monday, June 16, 2025

2010ರ ಬಜ್ಪೆ ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

ಮಂಗಳೂರು: 2010ರ ಬಜ್ಪೆ ವಿಮಾನ ದುರಂತದಲ್ಲಿ ಮಡಿದ ಪ್ರಯಾಣಿಕರು ಹಾಗೂ ಸಿಬ್ಬಂದಿಗಳ ಸ್ಮರಣಾರ್ಥ ನಗರದ ಕೂಳೂರಿನ ತಣ್ಣೀರು ಬಾವಿಯ ಬಳಿಯಿರುವ ಪಾರ್ಕ್ ನಲ್ಲಿ ನಿರ್ಮಿಸಲಾಗಿರುವ ಸ್ಮಾರಕಕ್ಕೆ ಭಾನುವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.,ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಮಂಗಳೂರು ತಹಶೀಲ್ದಾರ್ ಪುರಂದರ್ ಹಾಗೂ ಇತರೆ ಗಣ್ಯರು ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles