Sunday, June 8, 2025

ಹೊಳೆಗೆ ಸ್ನಾನಕ್ಕೆಂದು ಹೋದ ವಿದ್ಯಾರ್ಥಿಗಳಿಬ್ಬರು ನೀರು ಪಾಲು

ಕುಂದಾಪುರ: ಹೊಳೆಗೆ ಸ್ನಾನಕ್ಕೆಂದು ನೀರಿಗಿಳಿದ ವಿದ್ಯಾರ್ಥಿಗಳಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣಾ ವ್ಯಾಪ್ತಿಯ ಮಚ್ಚಟ್ಟು ಕಳೀನಜೆಡ್ಡು ಹೊಳೆಯಲ್ಲಿ ಗುರುವಾರ ನಡೆದಿದೆ.

ಮೃತರನ್ನು ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ (18), ಗಣೇಶ್ (18) ಎಂದು ಗುರುತಿಸಲಾಗಿದೆ. ಶಂಕರನಾರಾಯಣ ಜ್ಯೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಇವರಿಬ್ಬರು ಸ್ನೇಹಿತರು. ಗುರುವಾರ ಮಧ್ಯಾಹ್ನದ ವೇಳೆ ಹೊಳೆ ಬಳಿ ತೆರಳಿದ್ದು ಸ್ನಾನಕ್ಕೆಂದು ನೀರಿಗಿಳಿದಿದ್ದಾರೆ. ಈ ಸಂದರ್ಭ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.

ಸುಮಂತ್ ಹಾಗೂ ಗಣೇಶ್ ಮುಳುಗುತ್ತಿರುವುದನ್ನು ಕಂಡ ವ್ಯಕ್ತಿಯೊಬ್ಬರ ಮಾಹಿತಿಯಂತೆ ಸ್ಥಳೀಯರು ರಕ್ಷಿಸಲು ಮುಂದಾಗಿದ್ದಾರೆ. ಆದರೂ ಕೂಡ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಅಮಾಸೆಬೈಲು ಪಿಎಸ್ಐ ಸುಬ್ಬಣ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles