Sunday, June 8, 2025

ಮುಂದಿನ ದಿನಗಳಲ್ಲಿ ಉಡುಪಿಯ 5 ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ವಶ: ಎಂ.ಡಿ. ಲಕ್ಷ್ಮೀನಾರಾಯಣ

ಉಡುಪಿ: ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಸೋಲಲಿದೆ ಎಂದು ಗುಪ್ತಚರ ಇಲಾಖೆಯಿಂದ ಮಾಹಿತಿ ಬಂದಿರುವ ಹಿನ್ನೆಲೆ ಬಿಜೆಪಿಯವರಿಗೆ ನಡುಕ ಶುರುವಾಗಿದೆ. ಹೀಗಾಗಿ ತಾ.ಪಂ, ಜಿ.ಪಂ ಚುನಾವಣೆ ನಡೆಸಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಕಾಂಗ್ರೆಸ್ ಹಿಂದುಳಿದ ಘಟಕಗಳ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ ಆರೋಪಿಸಿದ್ದಾರೆ.


ಉಡುಪಿ ಕಾಂಗ್ರೆಸ್ ಭವನದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಸೋಲುವ ಭಯದಿಂದ ತಾ.ಪಂ, ಜಿ.ಪಂ ಚುನಾವಣೆ ಮಾತ್ರವಲ್ಲದೇ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆಸಲು ಕೂಡ ಹಿಂದೇಟು ಹಾಕುತ್ತಿದ್ದಾರೆ. ಆದರೆ, 2023ರಲ್ಲಿ ಬರುವ ವಿಧಾನಸಭೆ ಚುನಾವಣೆಯನ್ನು ಮುಂದೂಡಲು ಅವರಿಗೆ ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ವಶ ಆಗಬೇಕಿದೆ. ಅಲ್ಲಿಯವರೆಗೆ ನಾವು ವಿರಮಿಸುವುದಿಲ್ಲ ಎಂದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles