Sunday, June 8, 2025

ಉಡುಪಿ:ಜಿಲ್ಲಾಡಳಿತ ವತಿಯಿಂದ 73 ನೇ ಗಣರಾಜ್ಯೋತ್ಸವ ಆಚರಣೆ

ಉಡುಪಿ: ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ನಡೆಸಲಾಯಿತು.


ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರು ದ್ವಜಾರೋಹಣವನ್ನು ನೆರವೇರಿಸಿ, ಗೌರವ ವಂದನೆಯನ್ನು ಸ್ವೀಕರಿಸಿದರು.


ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗುರುತಿಸಿ ಸನ್ಮಾನಿಸಲಾಯಿತು. ಈ ಸಂದರ್ಭ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ನಗರ ಸಭೆ ಅಧ್ಯಕ್ಷರಾದ ಸುಮಿತ್ರಾ ಆರ್, ನಾಯಕ್, ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಕರಾವಳಿ ಕಾವಲು ಪಡೆ ಅಧೀಕ್ಷಕರಾದ ಅಂಶು ಕುಮಾರ್ ಮತ್ತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles