Sunday, June 8, 2025

ಉಡುಪಿಯಲ್ಲಿ ಕಳೆದ 24 ಗಂಟೆಗಳಲ್ಲಿ 677 ಮಂದಿಗೆ ಸೋಂಕು ದೃಢ: ಮೂವರು ಸಾವು

ಉಡುಪಿ: ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಲೇ ಇವೆ. ಉಡುಪಿ ಜಿಲ್ಲೆಯಲ್ಲಿಯೂ ಕೂಡ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 677 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 87,305 ಕ್ಕೆ ಏರಿಕೆಯಾಗಿದೆ.


ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದರೂ, ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಕೂಡ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 1502 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಕೊರೊನಾದಿಂದ ಚೇತರಿಸಿಕೊಂಡು ಗುಣಮುಖರಾದವರ ಸಂಖ್ಯೆ 81,089ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸದ್ಯ 5,718 ಸಕ್ರಿಯ ಪ್ರಕರಣಗಳಿದ್ದು, ಇನ್ನು, ಕಳೆದ 24 ಗಂಟೆಗಳಲ್ಲಿ ಉಡುಪಿಯ ಇಬ್ಬರು ಹಾಗೂ ಕಾರ್ಕಳದ ಓರ್ವ ಮಹಿಳೆ ಸೇರಿ ಮೂವರು ಮಹಿಳೆಯರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.


ಜಿಲ್ಲೆಯಲ್ಲಿ ಒಂದೇ ದಿನ ಪತ್ತೆಯಾಗಿರುವ 677 ಕೊರೊನಾ ಪಾಸಿಟಿವ್ ಪ್ರಕರಣಗಳ ಪೈಕಿ ಉಡುಪಿಯಲ್ಲಿ 500, ಕುಂದಾಪುರದಲ್ಲಿ 135, ಕಾರ್ಕಳದಲ್ಲಿ 41 ಹಾಗೂ ಹೊರ ಜಿಲ್ಲೆಯ ಓರ್ವರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿಯನ್ನು ನೀಡಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles