Sunday, June 8, 2025

ಉಡುಪಿಯಲ್ಲಿ ಕಳೆದ 24 ಗಂಟೆಗಳಲ್ಲಿ 1202 ಮಂದಿಗೆ ಕೊರೊನಾ ಪಾಸಿಟಿವ್: ಓರ್ವ ಸಾವು

ಉಡುಪಿ:ರಾಜ್ಯದ ಇತರ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ತನ್ನ ಕಬಂಧಬಾಹುವನ್ನು ವ್ಯಾಪಕವಾಗಿ ಚಾಚುತ್ತಿದೆ. ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯ ಹೆಚ್ಚಾಗುತ್ತಲೇ ಇದೆ. ಕಳೆದ 24ಗಂಟೆಗಳಲ್ಲಿ 1202 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 88,507 ಕ್ಕೆ ಏರಿಕೆಯಾಗಿದೆ.


ಉಡುಪಿ ಜಿಲ್ಲೆಯಲ್ಲಿ ಒಂದೆಡೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇನ್ನೊಂದೆಡೆ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 1,149 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 82,238 ಕ್ಕೆ ಏರಿಕೆಯಾಗಿದೆ. ಇನ್ನು, ಜಿಲ್ಲೆಯಲ್ಲಿ ಸದ್ಯ 5770 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲಿ ಓರ್ವ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles