ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಂಕಿಗೆ ತುತ್ತಾಗುವವರ ಸಂಖ್ಯೆಗಿಂತ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 898ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, 309ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಉಡುಪಿಯಲ್ಲಿ ಈವರೆಗೆ 94,103ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 90,895 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕಳೆದ 24ಗಂಟೆಗಳಲ್ಲಿ ಇಬ್ಬರು ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದು, ಆ ಮೂಲಕ ಈವರೆಗೆ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 518ಕ್ಕೆ ಏರಿಕೆಯಾಗಿದೆ.