Sunday, June 8, 2025

ಉಡುಪಿಯಲ್ಲಿ 230ಮಂದಿಗೆ ಕೊರೊನಾ ಸೋಂಕು ದೃಢ: 4 ಮಂದಿ ಸಾವು

ಉಡುಪಿ: ಜಿಲ್ಲೆಯಲ್ಲಿ ಕಳೆದ 24ಗಂಟೆಗಳಲ್ಲಿ 230ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 93,252ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲೆಯಲ್ಲಿ ನಿನ್ನೆ ಪತ್ತೆಯಾದ 230 ಪಾಸಿಟಿವ್ ಪ್ರಕರಣಗಳ ಪೈಕಿ ಉಡುಪಿ ತಾಲೂಕಿನಲ್ಲಿ 152, ಕುಂದಾಪುರದಲ್ಲಿ 25, ಕಾರ್ಕಳದಲ್ಲಿ 50, ಹೊರಜಿಲ್ಲೆಯ ಮೂವರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಇನ್ನು, ಕಳೆದ 24ಗಂಟೆಗಳಲ್ಲಿ ಉಡುಪಿಯಲ್ಲಿ 4ಮಂದಿ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದು, ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 513ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕಳೆದ 24ಗಂಟೆಗಳಲ್ಲಿ 984ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆ ಮೂಲಕ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 89,025ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಸದ್ಯ 3,714 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟ್ ಪ್ರಮಾಣ ಶೇಕಡಾ 12.3ರಷ್ಟಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles