ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮತ್ತೆ ತನ್ನ ವಶಕ್ಕೆ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಖಾಸಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಆಸ್ಪತ್ರೆಯನ್ನು ಸರ್ಕಾರದ ವಶಕ್ಕೆ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಮಾಹಿತಿ ನೀಡಿದ್ದಾರೆ.
ಆಸ್ಪತ್ರೆಗೆ ಹೆಚ್ಚುವರಿಯಾಗಿ 103 ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ವಾರ್ಷಿಕ ಅನುದಾನ 9.83 ಕೋಟಿ ರೂ.ಗೆ ಅನುಮೋದನೆ ನೀಡಲಾಗಿದೆ.