ಕಾಪು: ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಉದ್ಯಾವರ ಬೊಳ್ಜೆ ಗರಡಿ ಬಳಿಯ ರೈಲ್ವೆ ಹಳಿಯಲ್ಲಿ ಅಪರಿಚಿತ ಶವವು ಬುಧವಾರ ಪತ್ತೆಯಾಗಿದೆ.
ಗಂಡಸಿನ ಶವ ಛಿದ್ರ ಛಿದ್ರವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಮತ್ತು ಅವರ ಅಂಬ್ಯುಲೆನ್ಸ್ ಚಾಲಕ ನಾಗರಾಜ್ ಸಹಕಾರದಿಂದ ಶವವನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಇನ್ನು ಶವ ಯಾರದೆಂದು ಪತ್ತೆಯಾಗಿಲ್ಲ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.