ನವದೆಹೆಲಿ: 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಜನವರಿ 1, 2022ರಿಂದ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಲಸಿಕೆ ಪಡೆದುಕೊಳ್ಳಲು ಮಕ್ಕಳ ಪೋಷಕರು ಜನವರಿ 1 ರಿಂದ ಕೋವಿನ್ ಅಪ್ಲಿಕೇಶನ್ ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.
15 ರಿಂದ 18 ವರ್ಷ ವಯಸ್ಸಿನ ಮಕ್ಕಳು ಜನವರಿ 1 ರಿಂದ ಕೋವಿನ್ ಅಪ್ಲಿಕೇಶನ್ ನಲ್ಲಿ ನೋಂದಾಯಿಸಿಕೊಳ್ಳಬಹುದು. ವಿದ್ಯಾರ್ಥಿಗಳು ತಮ್ಮ ಶಾಲಾ ಗುರುತಿನ ಚೀಟಿಯೊಂದಿಗೆ ಅಥವಾ ಆಧಾರ್ ಕಾರ್ಡ್ ಸಂಖ್ಯೆಯ ಮೂಲಕ ನೋಂದಣಿ ಮಾಡಬಹುದಾಗಿದೆ ಎಂದು ಕೋವಿನ್ ಪ್ಲಾಟ್ ಫಾರ್ಮ್ ಮುಖ್ಯಸ್ಥ ಡಾ.ಆರ್.ಎಸ್ ಶರ್ಮಾ ಅವರು ಮಾಹಿತಿ ನೀಡಿದ್ದಾರೆ.